Belagavi NewsBelgaum NewsKannada NewsKarnataka News

ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಡಾ.ಸರಸ್ವತಿ ತಂಬಾಕೆ


ಪ್ರಗತಿವಾಹಿನಿ ಸುದ್ದಿ, ಬೆಟಗೇರಿ: ಆಗಾಗ ಧರೆಗಿಳಿಯುತ್ತಿರುವ ಮಳೆ ಮತ್ತು ಹವಾಮಾನ ವೈಪರಿತ್ಯ ನಡುವೆ ಡೆಂಘೀ ಮತ್ತು ಸಾಂಕ್ರಾಮಿಕ ರೋಗಗಳು ಆವರಿಸುವ ಲಕ್ಷಣಗಳು ಕಾಣಿಸುತ್ತಿವೆ. ಸ್ಥಳೀಯ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಎಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ತಿಳಿಸಿದ್ದಾರೆ.
ಶನಿವಾರ ಜು.೬ರಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸ್ಥಳೀಯ ಸಾರ್ವಜನಿಕರು ತಮ್ಮ ಸುತ್ತಲಿನ ಪ್ರದೇಶ, ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಕಾಯಿಸಿ ಆರಿಸಿ ಕುಡಿಯಬೇಕು, ಮೂರು ದಿನಗಳ ತನಕ ನೀರು ಸಂಗ್ರಹಿಸಿ ಇಡಬಾರದು. ಮನೆಯಲ್ಲಿ ತಯಾರಿಸಿದ ಆಹಾರದ ಪಾತ್ರೆಗಳ ಮೇಲೆ ಮುಚ್ಚಬೇಕು, ಕೊಳಚೆ ನೀರು ಮನೆ ಸುತ್ತಲೂ ನಿಲ್ಲದಂತೆ, ಸೊಳ್ಳೆಗಳು ಉತ್ಪತಿಯಾಗದಂತೆ ಮುನ್ನಚ್ಛರಿಕೆ ವಹಿಸಿ, ಸೊಳ್ಳೆ ಪರದೆ ನಿತ್ಯ ರಾತ್ರಿ ಹೊತ್ತು ಬಳಸಬೇಕೆಂದು ಸಲಹೆ ನೀಡಿದ್ದಾರೆ.
ತಮಗೆ ಹಲವಾರು ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಂಡರೆ ಡೆಂಘೀ ಇಲ್ಲವೇ ಸಾಂಕ್ರಾಮಿಕ ರೋಗಗಳ ಲಕ್ಷಣಗಳು ಇರಬಹುದು, ತಕ್ಷಣ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅವರನ್ನು ಭೇಟಿಯಾಗಿ ರೋಗ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಹಾಗೂ ರೋಗ ವಾಸಿಯಾಗುವ ಔಷಧೋಪಚಾರದ ಮಾಹಿತಿ, ಸಲಹೆಗಳನ್ನು ಸ್ಥಳೀಯರು ಪಡೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.
ತಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಹಾಗೂ ಡೆಂಘೀ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಮುಂಜಾಗ್ರತಾ ಕ್ರಮಗಳ ಕುರಿತು ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸ್ಥಳೀಯರಲ್ಲಿ ತಿಳುವಳಿಕೆ ಮೂಡಿಸಲು ಸ್ಥಳೀಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ಮೂಲಕ ಪ್ರಯತ್ನಿಸಲಾಗುವುದು ಎಂದು ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button