ಸ್ಥಳೀಯರಿಗೆ ಉದ್ಯೋಗ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಿ – ಕಾರ್ಮಿಕ ಸಚಿವರಿಗೆ ಡಾ.ಸೋನಾಲಿ ಸರ್ನೋಬತ್ ಮನವಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಸಾಕಷ್ಟು ದೊಡ್ಡ ದೊಡ್ಡ ಉದ್ಯಮಗಳಿದ್ದು, ದೇಶದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡಿವೆ. ಆದರೆ ಮೂಲಭೂತ ಸೌಲಭ್ಯದ ದೃಷ್ಟಿಯಿಂದ ಮತ್ತು ಸ್ಥಳೀಯರಿಗೆ ಉದ್ಯೋಗ ನೀಡುವ ಸಂಬಂಧ ಸೂಕ್ತ ಕ್ರಮವಾಗಿಲ್ಲ. ಈ ಬಗ್ಗೆ ನಿಯಮಾವಳಿ ರೂಪಿಸಬೇಕಾದ ಅಗತ್ಯವಿದೆ ಎಂದು ಸಾಮಾಜಿಕ ಕಾರ್ಯಕರ್ತೆ, ಬಿಜೆಪಿ ಜಿಲ್ಲಾ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಕಾರ್ಮಿಕ ಸಚಿವ ಶಿವರಾ್ಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕದ ಜಿಡಿಪಿಗೆ ಬೆಳಗಾವಿ ಉದ್ಯಮಗಳು ಉತ್ತಮ ಕೊಡುಗೆಯನ್ನು ನೀಡುತ್ತಿವೆ. ಆದರೆ ಅದಕ್ಕೆ ತಕ್ಕಂತೆ ಈ ಉದ್ಯಮಗಳ ಕಡೆಗೆ ಸರಕಾರ ಗಮನಹರಿಸುತ್ತಿಲ್ಲ. ಜೊತೆಗೆ ಈ ಉದ್ಯಮಗಳಲ್ಲಿ ಕೆಲಸ ಮಾಡಲು ಬಿಹಾರ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳದಿಂದ ಬೆಳಗಾವಿಗೆ ಸಾಕಷ್ಟು ಕಾರ್ಮಿಕರು ಬಂದಿದ್ದಾರೆ. ಇದರಿಂದ ಸ್ಥಳೀಯ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಅವರು ನಿರುದ್ಯೋಗಿಗಳಾಗಿದ್ದು, ಬೇರೆ ಬೇರೆ ವ್ಯಸನಗಳಿಗೆ ಮತ್ತು ಖಿನ್ನತೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಸ್ಥಳೀಯರಿಗೆ ಉದ್ಯೋಗ ಸಿಗುವ ಸಂಬಂಧ ನಿಯಂತ್ರಣ ರೂಪಿಸಬೇಕಿದೆ ಎಂದು ಮನವಿಯಲ್ಲಿ ಕೋರಲಾಗಿದೆ.
ಈ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವ ಶಿವರಾಮ ಹೆಬ್ಬಾರ್ ಭರವಸೆ ನೀಡಿದರು.
ಪಂಡಿತ್ ವಿಜಯೇಂದ್ರ ಶರ್ಮಾ, ಪ್ರಿಯಾ ಪುರಾಣಿಕ್, ಡಾ.ಸಂಜಯ್ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.
ಕ್ಯಾನ್ಸರ್ ಗೆ ಶಾಸಕ ಪಿ.ಟಿ.ಥಾಮಸ್ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ