ಪ್ರಗತಿವಾಹಿನಿ ಸುದ್ದಿ, ಖಾನಾಪುರ –
ಹೆಣ್ಣು ಮಕ್ಕಳಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಅತ್ಯಗತ್ಯವಾಗಿದೆ. ಸಮಾಜದಲ್ಲಿ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಲು ಪ್ರೇರೇಪಿಸಬೇಕು ಎಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಹೇಳಿದರು.
ಖಾನಾಪುರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಕ್ಷತ್ರಿಯ ಮರಾಠಾ ಸಮಾಜದ ಸಭೆಯಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಬೆಳಗಾವಿಯ ಬಿಮ್ಸ್‌ನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರಿಯಾ ಪಾಟೀಲ್ ಅವರನ್ನು ಸನ್ಮಾನಿಸಿದ ಡಾ. ಸೋನಾಲಿ ಸರ್ನೋಬತ್, ವಿದ್ಯಾರ್ಥಿನಿ ಶ್ರಿಯಾ ಅವರ ಮೊದಲ ವರ್ಷದ ಎಂಬಿಬಿಎಸ್‌ನ ಪಠ್ಯ ಪುಸ್ತಕಗಳ ಸಂಪೂರ್ಣ ಖರ್ಚು ಭರಿಸುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಬಿಎಸ್‌ಎಫ್‌ಗೆ ಆಯ್ಕೆಯಾದ ಖಾನಾಪುರ ತಾಲೂಕಿನ ದೆವಾಚಿ ಹಟ್ಟಿ ಗ್ರಾಮದ ಅಭಿಲಾಷ್ ಹಿಂದೂರಾವ್ ದೇಸಾಯಿ ಅವರ ತಂದೆಗೆ ಗೌರವ ಸಮರ್ಪಣೆ ಮಾಡಲಾಯಿತು. ರಮೇಶ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
ಕುಗ್ರಾಮದ ಕೋವಿಡ್ ವಾರಿಯರ್ ಗಳ ಜೀವಕ್ಕೆ ಭದ್ರತೆ ನೀಡಿದ ಡಾ.ಸೋನಾಲಿ ಸರ್ನೋಬತ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ