ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಕೀಯ ನಾಯಕರು ಒಬ್ಬೊಬ್ಬರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇತ್ತೀಚೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತನುಜಾ ಎಂಬ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಅದರ ಬೆನ್ನಲ್ಲೇ ಇದೀಗ ಆರೋಗ್ಯ ಸಚಿವ ಡಾ.ಸುಧಾಕರ್ ಕೂಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ನಿಜ ಜೀವನದ ಕಥೆಯಾಧರಿಸಿದ ತನುಜಾ ಚಿತ್ರದಲ್ಲಿ ಇದೀಗ ಸಚಿವ ಸುಧಾಕರ್ ಕೂಡ ಬಣ್ಣ ಹಚ್ಚಿದ್ದಾರೆ. ಹರೀಶ್ ಎಂ.ಡಿ ಹಳ್ಳಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ರಾಜಕೀಯ ನಾಯಕರು ಕಾಣಿಸಿಕೊಳ್ಳುತ್ತಿರುವುದು ವಿಶೇಷ.
ಕೋವಿಡ್ ಸಂದರ್ಭದಲ್ಲಿ ನೀಟ್ ಪರೀಕ್ಷೆ ಬರೆಯಲು ಸುಮಾರು 350 ಕಿ.ಮೀ ದೂರ ಪ್ರಯಾಣ ಮಾಡಿ ಗಮನ ಸೆಳೆದಿದ್ದ ಹುಡುಗಿಯ ಕಥೆ ಈ ಚಿತ್ರದ ಒನ್ ಲೈನ್ ಸ್ಟೋರಿ. ಈ ಘಟನೆ ನಡೆದಾಗ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದರೆ, ಡಾ.ಸುಧಾಕರ್ ಆರೋಗ್ಯ ಸಚಿವರಾಗಿದ್ದರು. ತಮ್ಮ ರೀಯಲ್ ಲೈಫ್ ಪಾತ್ರಕ್ಕೆ ಇದೀಗ ಇಬ್ಬರೂ ರಾಜಕೀಯ ನಾಯಕರು ಬಣ್ಣ ಹಚ್ಚಿದ್ದಾರೆ.
ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ತಾರಾಗಣದಲ್ಲಿ ಇದ್ದಾರೆ.
ಎಕ್ಸ್ ಇ ಹೊಸ ರೂಪಾಂತರಿ ವೈರಸ್ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ