ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ರಾಜ್ಯದಲ್ಲಿ BF.7 ಹೊಸ ರೂಪಾಂತರಿ ವೈರಸ್ ನಡಿವೆಯೇ ಒಮಿಕ್ರಾನ್ ಹೊಸ ರೂಪಾಂತರಿ ತಳಿ ಪತ್ತೆಯಾಗಿದ್ದು, ಜನರಲ್ಲಿ ಇನ್ನಷ್ಟು ಆತಂಕವನ್ನುಂಟು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ರಾಜ್ಯದಲ್ಲಿ ಯಾವುದೇ ಕೊರೊನಾ ಹೊಸ ತಳಿ ಪತ್ತೆಯಾಗಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಕೊರೊನಾ ಹೊಸ ತಳಿ ಜನರ ಮೇಲೆ ಗಂಭೀರ ಪರಿಣಾಮವನ್ನು ಬೀರಲ್ಲ. ಈಗಾಗಲೇ ಶೇ.85ರಷ್ಟು ಜನರಿಗೆ ಕೊರೊನಾ ಬಂದು ಹೋಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದೆ. ಹಾಗಾಗಿ ಯಾವುದೇ ಸಮಸ್ಯೆಯಿಲ್ಲ ಎಂದರು.
ಒಮಿಕ್ರಾನ್ ಹೊಸ ರೂಪಾಂತರಿXBB1.5 ವೈರಸ್ ನಿಂದ ಯಾವುದೇ ಅಪಾಯವಿಲ್ಲ. ತಜ್ಞರು ಅಧ್ಯಯನ ನಡೆಸಿ ಯಾವುದೇ ಆತಂಕ ಬೇಡ ಎಂದು ತಿಳಿಸಿದ್ದಾರೆ. ಹಾಗಾಗಿ ಒಮಿಕ್ರಾನ್ ರೂಪಾಂತರಿ ವೈರಸ್ ಬಗ್ಗೆಯೂ ಯಾರೂ ಆತಂಕ ಪಡಬೇಕಿಲ್ಲ ಎಂದು ತಿಳಿಸಿದರು.
https://pragati.taskdun.com/j-p-naddakarnataka-visitbjpcongressjdstwett-war/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ