
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಅನಾರೋಗ್ಯದ ಕಾರಣಕ್ಕಾಗಿ ಸಚಿವ ಸಂಪುಟ ಸಭೆಯಲ್ಲಿಯೂ ಭಾಗಿಯಾಗಿಲ್ಲ ಎನ್ನಲಾಗಿದೆ.
ಅನಾರೋಗ್ಯದಿಂದಾಗಿ ಸಚಿವ ಸುಧಾಕರ್ ಬೆಂಗಳೂರಿನ ನಿವಾಸದಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಅನಾರೋಗ್ಯ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸವನ್ನೂ ರದ್ದು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಚಿವ ಸುಧಾಕರ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ನೀಡಲಾಗುತ್ತಿದ್ದ ಚಿಕಿತ್ಸೆ, ಆಕ್ಸಿಜನ್ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದರು.
ಬ್ಲ್ಯಾಕ್ ಫಂಗಸ್ ಅಟ್ಟಹಾಸ; 12 ಜನ ಬಲಿ