Kannada NewsKarnataka NewsLatestPolitics
*ನೂತನ ಶಾಸಕ ಪ್ರದೀಪ್ ಈಶ್ವರ್ ಗೆ ಬಹಿರಂಗ ಸವಾಲು ಹಾಕಿದ ಮಾಜಿ ಸಚಿವ ಡಾ.ಸುಧಾಕರ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯ ಸಂದರ್ಭದಿಂದಲೂ ಮಾಜಿ ಸಚಿವ ಡಾ.ಸುಧಾಕರ್ ಹಾಗೂ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಚುನಾವಣೆಯಲ್ಲಿ ಡಾ.ಸುಧಾಕರ್ ವಿರುದ್ಧ ಗೆದ್ದು ಬೀಗಿರುವ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಕೆಂಡಾಮಂಡಲರಾಗಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರದಲ್ಲಿ ಚಿಲ್ಲರೇ ರಾಜಕಾರಣ ಮಾಡುತ್ತಿದ್ದಾರೆ. ರೌಡಿ ರಾಜಕಾರಣ ಬೆಳೆಸುತ್ತಿದ್ದಾರೆ. ಕಳೆದ ವರ್ಷ ಚಿಕ್ಕಬಳ್ಳಾಪುರ ಕ್ಷೇತ್ರ ಶಾಂತಿಯುತವಾಗಿತ್ತು. ಈಗ ಕ್ಷೇತ್ರದ ಬಿಜೆಪಿ ಮುಖಂಡರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಸುಧಾಕರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡರು ಚಿಕ್ಕಬಳ್ಳಾಪುರದಲ್ಲಿ ಗೂಂಡಾಗಿರಿ ರಾಜಕಾರಣಕ್ಕೆ ಮುಂದಾಗಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಗೆ ಧೈರ್ಯವಿದ್ದರೆ ರಾಜೀನಾಮೆ ಕೊಟ್ಟು ಸ್ವತಂತ್ರವಾಗಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.