Latest

ಸಾರ್ವಜನಿಕರಿಗೆ ಆರೋಗ್ಯ ಸಚಿವರ ಸಲಹೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಜನರು ಆತಂಕಕ್ಕೀಡಾಗುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ತಕ್ಷಣ ಉಸಿರಾಟದ ತೊಂದರೆಯಾಗುತ್ತಿದೆ ಎಂದು ಭಯಗೊಳ್ಳುವುದು ಬೇಡ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರು ಪ್ರತಿದಿನ ಮುಂಜಾನೆ 5-6 ಗಂಟೆ ಸಮಯದ ಒಳ್ಳೆಯ ಗಾಳಿಯಿರುವಲ್ಲಿ ಕುಳಿತು ಪ್ರಾಣಾಯಾಮವನ್ನು ಮಾಡಿ. 30 ನಿಮಿಷಗಳ ಕಾಲ ಲಘು ವ್ಯಾಯಾಮ ಮಾಡಿ. ಇದರಿಂದ ಶ್ವಾಸಕೋಶದಲ್ಲಿ ಉಸಿರಾಡುವ ಶಕ್ತಿ ಬಲವಾಗುತ್ತದೆ ಎಂದು ಸಲಹೆ ನೀಡಿದರು.

ಕೋವಿಡ್ ಪಾಸಿಟಿವ್ ಎಂದಾಕ್ಷಣ ಜನರು ತನಗೆ ಆಕ್ಸಿಜನ್ ಕೊರತೆಯಾಗುತ್ತಿದೆ ಎಂದು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಇಂತಹ ಭಯ ಬೇಡ. ಶೇ.90ರಷ್ಟು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಾಧ್ಯವಿಲ್ಲ. ಪಾಸಿಟಿವ್ ಎಂದಾಕ್ಷಣ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ. ಮನೆಯಲ್ಲಿಯೇ ಇದ್ದು, ವೈದ್ಯರ ಸಲಹೆ ಮೇರೆಗೆ ಔಷಧ ಪಡೆದುಕೊಳ್ಳಿ ಎಂದು ಹೇಳಿದರು.

ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಲಸಿಕೆ, ಚಿಕಿತ್ಸೆ, ಬೆಡ್, ಆಕ್ಸಿಜನ್, ಐಸಿಯು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗುವುದು. ವಿಶೇಷವಾಗಿ ಬೆಂಗಳೂರಿನಲ್ಲಿ ಕೂಡ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

Home add -Advt

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 13 ಕೊರೊನಾ ರೋಗಿಗಳ ದುರ್ಮರಣ

Related Articles

Back to top button