Latest

ಒಂದೇ ಹೆಂಡ್ತಿ ಚಾಲೇಂಜ್ ; ಶಾಸಕರ ಸಹಿ ಸಂಗ್ರಹಕ್ಕೆ ಮುಂದಾದ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸುಧಾಕರ್ ಅವರ ’ಏಕಪತ್ನಿ ವ್ರತಸ್ಥ’ ಸವಾಲಿಗೆ ಸಿಡಿದೆದ್ದಿರುವ ಕಾಂಗ್ರೆಸ್ ನಾಯಕರು ಇದೀಗ ಸರ್ಕಾರದ ವಿರುದ್ಧ ಹೊಸದೊಂದು ತಂತ್ರ ಹೆಣೆಯಲು ಮುಂದಾಗಿದ್ದಾರೆ.

ವಿಪಕ್ಷ ನಾಯಕರು ಸತ್ಯ ಹರಿಶ್ಚಂದ್ರರೇ? ಏಕಪತ್ನಿ ವ್ರತಸ್ಥರೇ? ಎಲ್ಲಾ 225 ಶಾಸಕರ ವಿರುದ್ಧ ತನಿಖೆ ನಡೆಯಲಿ ಎಂದು ಸಚಿವ ಸುಧಾಕರ್ ಹೇಳಿಕೆ ಬೆನ್ನಲ್ಲೇ ಇದೀಗ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಸಭೆ ಸೇರಿದ್ದು, ಸುಧಾಕರ್ ಹೇಳಿಕೆ ವಿರುದ್ಧ ತನಿಖೆಗೆ ಆಗ್ರಹಿಸಲು ಮುಂದಾಗಿದ್ದಾರೆ.

225 ಶಾಸಕರ ವಿರುದ್ಧ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಆಗ್ರಹಿಸಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಶಾಸಕರ ಸಹಿ ಸಂಗ್ರಹಕ್ಕೆ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅಧಿವೇಶನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ವಿಷಯ ಪ್ರಸ್ತಾಪಿಸಿದರು. ಸುಧಾಕರ್ ರಾಜಿನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

224 ಶಾಸಕರ ಏಕಪತ್ನಿ ವ್ರತ ತನಿಖೆಯಾಗಲಿ: ಸುಧಾಕರ ಓಪನ್ ಚಾಲೇಂಜ್

ಏಕಪತ್ನಿ ವ್ರತ ಹೇಳಿಕೆ; ಸದನದಲ್ಲೇ ಚರ್ಚೆ ಮಾಡ್ತೀವಿ ಎಂದ ಡಿಕೆಶಿ

ಬೆಂಕಿ ಹೊತ್ತಿಸಿದ ಸುಧಾಕರ್ ಏಕಪತ್ನಿ ವ್ರತ ಹೇಳಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button