Latest

*ಬಾಲ್ಕನಿಯಲ್ಲೇ ಆತ್ಮಹತ್ಯೆಗೆ ಶರಣಾದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ಮನೆಯ ಬಾಲ್ಕನಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ.

ಮಲ್ಲೇಶ್ವರಂ ನ ಸಾಯಿ ರೆಸಿಡೆನ್ಸ್ ಅಪಾರ್ಟ್ ಮೆಂಟ್ ನ ಬಾಲ್ಕನಿಯಲ್ಲಿ 45 ವರ್ಷದ ಮಹಿಳೆ ನೇಣಿಗೆ ಕೊರಳೊಡ್ಡಿದ್ದಾರೆ. ಮಹಿಳೆಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.

ರಸ್ತೆಯ ಬದಿಯಲ್ಲಿಯೇ ಇರುವ ಅಪಾರ್ಟ್ ಮೆಂಟ್ ನ ಬಾಲ್ಕನಿಯಲ್ಲಿ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button