Kannada NewsLatestWorld

*ಇರಾನ್ ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಭೀಕರ ದಾಳಿ: ಅಂತಿಮ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್*

ಪ್ರಗತಿವಾಹಿನಿ ಸುದ್ದಿ: ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ಮುಂದುವರೆದಿದೆ. ಅಮೆರಿಕಾ ಇರಾನ್ ಮೇಲೆ ಭೀಕರ ದಾಳಿ ನಡೆಸಿದ್ದು, ಇರಾನ್‌ನ ಮಿಲಿಟರಿ ಶಕ್ತಿ ಮತ್ತು ಆರ್ಥಿಕತೆಯ ಮೇಲೆ ಅಮೆರಿಕದ ಸೇನೆ ಮರಣಾಂತಿಕ ಪೆಟ್ಟು ನೀಡಿದೆ.

ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ ಮಾಡಿದ್ದಾರೆ. ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ ದಾಳಿ ನಡೆಸಲಾಗಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಇದು ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ ಎಂದು ಹೇಲಲಾಗುತ್ತಿದೆ.

Home add -Advt

ಅಮೆರಿಕಾ ದಾಳಿಯಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮುಕ್ತ ಸಂಚಾರಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದುವಂತಿಲ್ಲ. ವಿಶ್ವದ ಶಾಂತಿಗೆ ಧಕ್ಕೆ ತರುವ ಸಾಮರ್ಥ್ಯವನ್ನು ಇರಾನ್‌ಗೆ ಪಡೆಯಲು ಬಿಡುವುದಿಲ್ಲ. ಇರಾನ್ ಮಿಲಿಟರಿ ಪಡೆಗಳು ಕೂಡಲೇ ಶರಣಾಗಬೇಕು. ಇನ್ನುಳಿದಿರುವ ದೇಶವನ್ನಾದರೂ ಉಳಿಸಿಕೊಳ್ಳಬೇಕಾದರೆ ಆಯುಧಗಳನ್ನು ಕೆಳಗಿಡಬೇಕು ಎಂದು ಇರಾನ್‌ಗೆ ಟ್ರಂಪ್ ಅಂತಿಮ ಎಚ್ಚರಿಕೆ ನೀಡಿದ್ದಾರೆ.


Related Articles

Back to top button