ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಕುಮಾರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಕುಮಾರ್, ಡ್ರಗ್ಸ್ ಪೆಡ್ಲರ್ ಗಳಿಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾದುತ್ತಿದ್ದರು. ಡಾರ್ಕ್ ವೆಬ್ ಸೈಟ್ ಮೂಲಕ ಡ್ರಗ್ಸ್ ಖರೀದಿ ಕೂಡ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.
ದರ್ಶನ್ ಕುಮಾರ್ ಡ್ರಗ್ಸ್ ಡೀಲಿಂಗ್ ವೇಳೆಯೇ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ