ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಅಂತರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಕೆ.ಜಿ ನಗರದಲ್ಲಿ ದಾಳಿ ನಡೆಸಿದ ಪೊಲೀಸರು ನಾಲ್ವರು ಅಂತರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಬರೋಬ್ಬರಿ 201 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ