ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಿದರು.
ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ಭವನದ ಕೊಠಡಿ ಸಂಖ್ಯೆ 29ರಲ್ಲಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಕೇಂದ್ರ ಸಂಪುಟ ಸಚಿವರು, ಬಿಜೆಪಿ ಹಾಗೂ ಎನ್ ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಉಪಸ್ಥಿತರಿದ್ದರು.
ಕತ್ತಿ ಬುದ್ಧಿ ಇಲ್ಲದ ಅವಿವೇಕಿ; ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಹೆಚ್.ಸಿ.ಮಹದೇವಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ