15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಸ್ವೀಕಾರ; ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದ ಇತಿಹಾಸದಲ್ಲಿಯೇ ಐತಿಹಾಸಿಕ ದಿನ. ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಈ ಮೂಲಕ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ದೇಶದ ಮೊದಲ ಆದಿವಾಸಿ ಮಹಿಳೆ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರು ಚುನಾಯಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಓಡಿಶಾ ಮೂಲದ ಸಂತಾಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಬಳಿಕ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸಾಂಕೇತಿಕವಾಗಿ ನೂತನ ರಾಷ್ಟ್ರಪತಿಯವರಿಗೆ ತಮ್ಮ ಕುರ್ಚಿ ಬಿಟ್ಟುಕೊಟ್ಟರು.
ಈ ವೇಳೆ ದೇಶವನ್ನುದ್ದೇಶಿಸಿ ಮಾತನಾದಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ದೇಶಕ್ಕೆ ಸ್ವಾತಂತ್ರ್ಯಬಂದು 75 ವರ್ಷಗಳಾಗಿರುವ ಪವಿತ್ರ ಸಂದರ್ಭದಲ್ಲಿ ನಾನು ರಾಷ್ಟ್ರಪತಿಯಾಗಿ ಜವಾಬ್ದಾರಿ ವಹಿಸಿಕೊಳ್ಲುತಿರುವುದು ಐತಿಹಾಸಿಕ ಸಂದರ್ಭ. ದೇಶದ ಜನರ ಪ್ರೀತಿಯೇ ನನ್ನ ಶಕ್ತಿ ಎಂದರು.
ಪೂರ್ವ ಭಾರತದ ಒಂದು ಸಣ್ಣ ಹಳ್ಳಿಯ ಆದಿವಾಸಿ ಸಮುದಾಯದ ಮಹಿಳೆ ನಾನು. ಸಾಮಾನ್ಯ ಆದಿವಾಸಿ ಮಹಿಳೆ ಇಂದು ದೇಶದ ರಾಷ್ಟ್ರಪತಿ ಸ್ಥಾನಕ್ಕೆ ಬಂದಿದ್ದು, ನಮ್ಮ ದೇಶದ ಪ್ರಜಾಪ್ರಭುತ್ವದ ಶಕ್ತಿ. ಇದು ನನಗೆ ಸಿಕ್ಕ ಗೌರವ ಮಾತ್ರವಲ್ಲ ಇಡೀದೇಶದ ಬಡ ಜನರಿಗೆ ಸಿಕ್ಕ ಗೌರವ ದೇಶದ ಬಡವರು ನಾನು ರಾಷ್ಟ್ರಪತಿಯಾಗಬೇಕು ಎಂದು ಕನಸು ಕಾಣುತ್ತಾರೆ. ಆ ಕನಸು ನನಸು ಮಾಡಿಕೊಳ್ಳಬಹುದು ಎಂಬುದು ಈ ಮೂಲಕ ನಿಜವಾಗಿದೆ ಎಂದು ಹೇಳಿದರು.
ಜುಲೈ 25ರಂದೇ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸುವುದು ಯಾಕೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ