Latest

ಭೀಕರ ಅಪಘಾತ: 7 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ, ಕಲಬುರಗಿ – ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಮೃತಪಟ್ಟಿದ್ದಾರೆ.

ಕಲಬುರಗಿ ಜಿಲ್ಲೆಯ ಸಾವಳಗಿ ಬಳಿ ಈ ಅಪಘಾತ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಸ್ಥಳದಲ್ಲೇ ನಾಲ್ವರು ಮಹಿಳೆಯರು, ಮೂವರು ಪುರುಷರು ಮೃತರಾಗಿದ್ದಾರೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಆಳಂದದವರು. ಗರ್ಭಿಣಿಗೆ ಆಳಂದದಲ್ಲಿ ಚಿಕಿತ್ಸೆ ದೊರೆಯದ ಕಾರಣ ಅವಳನ್ನು ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಈ ಅಪಘಾತ ಉಂಟಾಗಿದೆ ಎನ್ನಲಾಗಿದೆ. ಅಪಘಾತ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದರೆ ಲಾರಿ ಕೂಡ ಮಗುಚಿಬಿದ್ದು ಜಖಂ ಆಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button