
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವುದು, ಗೋರಕ್ಷಕರ ಬಹುದಿನಗಳ ಕನಸಾಗಿತ್ತು. ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಲಕ್ಷಾಂತರ ಗೋ ರಕ್ಷಕರ ಕನಸು ನನಸು ಮಾಡಿದ್ದು,ಸರ್ಕಾರದ ಕ್ರಮ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಹರ್ಷ ವ್ಯಕ್ತಪಡಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಸಂದರ್ಭದಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆಯಾಗಿದ್ದು ನನ್ನ ಪೂರ್ವಜನ್ಮದ ಪುಣ್ಯವಾಗಿದೆ. ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ತನ್ನ ಜವಾಬ್ದಾರಿ ನಿಭಾಯಿಸಿದ್ದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆಯಾಗಿ ರಾಜ್ಯಾದ್ಯಂತ ಸಂಚರಿಸಿ ಕಾಯ್ದೆ ಅನುಷ್ಠಾನದ ಮೇಲೆ ನಿಗಾವಹಿಸುತ್ತೇನೆ ಎಂದು ಡಾ. ಸೋನಾಲಿ ಸರ್ನೋಬತ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಈಗ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು , ಈ ಕಾಯ್ದೆ ಉಲ್ಲಂಘನೆ ಮಾಡುವವರ ಮೇಲೆ ನಿರಂತರವಾಗಿ ನಿಗಾ ಇಡಲಾಗುವುದು, ರಾಜ್ಯದ ವಿವಿಧ ಜಿಲ್ಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಕಾಯ್ದೆ ಉಲ್ಲಂಘನೆ ಮಾಡುವವರ ಮೇಲೆ ನಿಗಾ ಇಡುವುದು ನಮ್ಮ ಜವಾಬ್ದಾರಿಯಾಗಿದ್ದು ಈ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುವ ಸಂಕಲ್ಪ ಮಾಡಿರುವುದಾಗಿ ಡಾ.ಸೋನಾಲಿ ಸರ್ನೋಬತ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ