Kannada NewsKarnataka NewsLatest

*ಅರಣ್ಯಾಧಿಕಾರಿಗಳಿಗೂ ಎದುರಾಯ್ತು ಹುಲಿ ಉಗುರು ಸಂಕಷ್ಟ; DRFO ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ನಟರು, ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳ ಬಳಿಕ ಈಗ ಸ್ವತಃ ಅರಣ್ಯಾಧಿಕಾರಿಗಳಿಗೂ ಸಂಕಷ್ಟ ತಂದೊಡ್ಡಿದೆ.

ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಚಿಕ್ಕಮಗಳೂರು ಜಿಲ್ಲೆ ಕಳಸದ ಉಪ ವಲಯ ಅರಣ್ಯಾಧಿಕಾರಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಉಪವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅಮಾನತುಮಾಡಿ ಆದೇಶ ಹೊರಡಿಸಲಾಗಿದೆ.

ಡಿಆರ್ ಎಫ್ ಒ ದರ್ಶನ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಅಮಾನತುಗೊಳಿಸಿ ಲಿಖಿತ ಆದೇಶ ಹೊರಡಿಸಲಾಗಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button