Kannada NewsKarnataka NewsLatest

ಲಕ್ಷ್ಮಿ ತಾಯಿ ಫೌಂಡೇಶನ್ ನಿಂದ ಕುಡಿಯುವ ನೀರು ಪೂರೈಕೆ

https://youtu.be/IYLMcnUuXPA

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯ ಎ ಎಚ್ ಡಬ್ಲೂ ಆರ್ಮಿ ಕ್ವಾರ್ಟರ್ಸ್ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಲಕ್ಷ್ಮಿ ತಾಯಿ ಫೌಂಡೇಶನ್ ನಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.
ಆರ್ಮಿ ಕ್ವಾರ್ಟರ್ಸ್ ನಲ್ಲಿ 276 ಮನೆಗಳಿದ್ದು, ಅಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗಿತ್ತು. ಜನರ ಕಷ್ಟಗಳಿಗೆ ಸ್ಪಂದಿಸಿ ಪ್ರತಿನಿತ್ಯ ಕುಡಿಯುವ ನೀರಿನ ಟ್ಯಾಂಕರ್ ನ್ನು ಪೂರೈಕೆ ಮಾಡಲಾಗುತ್ತಿದೆ.
  ಆರ್ಮಿ ವೆಲ್ ಫೇರ್ ಕಮೀಟಿಯ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಅಲ್ಲಿನ ನಿವಾಸಿಗಳು ನೀರು ಪೂರೈಕೆಗಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ಲಕ್ಷ್ಮಿ ತಾಯಿ ಫೌಂಡೇಶನ್ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 

Home add -Advt

Related Articles

Back to top button