Kannada NewsKarnataka News

ಕುಡಿಯುವ ನೀರು ಸರಬರಾಜು: ಸಚಿವರ ಅಧ್ಯಕ್ಷತೆಯಲ್ಲಿ ಜೂ.7 ರಂದು ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸ್ಮಾರ್ಟ್ ಸಿಟಿ, ಕೆಯುಐಡಿಎಫ್ ಸಿ ಹಾಗೂ ಕುಡಿಯುವ ನೀರು ಸರಬರಾಜು ಕುರಿತು ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಜೂನ್ 7) ಬೆಳಿಗ್ಗೆ 11 ಗಂಟೆಗೆ ಬೆಳಗಾವಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಸಾರ್ವಜನಿಕರು ಕೂಡ ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಬಹುದು ಎಂದು ಪಾಲಿಕೆಯ   ಆಯುಕ್ತ ರುದ್ರೇಶ ಗಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://pragati.taskdun.com/newly-married-coupledeathheart-attack/

Related Articles

Back to top button