Kannada NewsKarnataka News

ಒಂದೇ ದಿನ 4 ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ

ಒಂದೇ ದಿನ 4 ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ

ರಾಜ್ಯದಲ್ಲೇ ಮಾದರಿ ಕ್ಷೇತ್ರ ಮಾಡುವ ಉದ್ದೇಶದೊಂದಿಗೆ ಹೆಜ್ಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ಗ್ರಾಮೀಣ ಕ್ಷೇತ್ರದ 4 ಗ್ರಾಮಗಳಲ್ಲಿ ಒಂದೇ ದಿನ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗ್ರಾಮಸ್ಥರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಪೂಜೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿದರು. ಹಲವಾರು ವರ್ಷಗಳಿಂದ  ಕಂಗ್ರಾಳಿ ಬಿ ಕೆ, ಕಂಗ್ರಾಳಿ ಕೆ ಎಚ್, ಅಂಬೇವಾಡಿ, ಹಾಗೂ ಕಲ್ಲೆಹೋಳ ಗ್ರಾಮಸ್ಥರು ಕಾಂಕ್ರೀಟ್ ರಸ್ತೆ ನಿರ್ಮಿಸಬೇಕೆನ್ನುವ ಬೇಡಿಕೆ ಇಟ್ಟಿದ್ದರು. ಇದೀಗ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿ ನಾಲ್ಕೂ ಗ್ರಾಮಗಳಿಗೆ ಕಾಂಕ್ರೀಟ್ ರಸ್ತೆ ಮಂಜೂರು ಮಾಡಿಸಿದರು.
ಮಂಗಳವಾರ ಪೂಜೆ ನೆರವೇರಿಸಿದ ಹೆಬ್ಬಾಳಕರ್, ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಿರಂತರವಾಗಿ ಮುಂದುವರಿಯಲಿದೆ. ಗ್ರಾಮೀಣ ಜನರು ಹಲವು ವರ್ಷಗಳಿಂದ ಕಟ್ಟಿಕೊಂಡಿದ್ದ ಅಭಿವೃದ್ಧಿ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿದ್ದೇನೆ. ಹಲವು ವರ್ಷಗಳಿಂದ ಅತ್ಯಂತ ಹಿಂದುಳಿದಿದ್ದ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿಯನ್ನಾಗಿಸುವ ಉದ್ದೇಶದೊಂದಿಗೆ ಹೆಜ್ಜೆ ಇಡುತ್ತಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಆಯಾ ಗ್ರಾಮಗಳ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಮಹಿಳಾ ಸಂಘಗಳ ಕಾರ್ಯಕರ್ತರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಎಲ್ಲ ಗ್ರುಪ್ ಗಳಿಗೆ ಶೇರ್ ಮಾಡಿ)

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button