National

*ಕಾಂಚನ್ ಜುಂಗಾ ಎಕ್ಸ್ ಪ್ರೆಸ್ ರೈಲು ಅಪಘಾತ: ಸಾವಿನ ಸಂಖ್ಯೆ 15ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಕಾಂಚನ್ ಜುಂಗಾ ಎಕ್ಸ್ ಪ್ರೆಸ್ ರೈಲು ಹಾಗೂ ಗೂಡ್ಸ್ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

Home add -Advt

ಪಶ್ಚಿಮ ಬಂಗಾಳದ ದಾರ್ಜಿಲಿಂಗ್ ಜಿಲ್ಲೆಯ ಪನ್ಸಿಡೆವಾ ಪ್ರದೇಶದಲ್ಲಿ ಈ ದುರಂತ ಸಮ್ಭವಿಸಿದೆ. ಸಿಲ್ದಾಹ್ ಗೆ ಹೋಗುವ ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲಿಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿಯಾಗಿದೆ. ಘಟನೆಯಲ್ಲಿ 15 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದಾರೆ.

ಇದೇ ವೇಳೆ ರೈಲು ಅಪಘಾತದಲ್ಲಿ ಮೃತಪಟ್ಟ ಕುಟುಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.


Related Articles

Back to top button