
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಬೆನಕನಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.
ಗುರುವಾರ ಸಂಜೆ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರೆ, ಶುಕ್ರವಾರ ಬೆಳಗ್ಗೆ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಪೂಜೆ ನೆರವೇರಿಸಿದರು.

ಜಿಲ್ಲಾ ಖನಿಜ ನಿಧಿ ಯೋಜನೆ ಹಾಗೂ ಲೋಕೋಪಯೋಗಿ ಇಲಾಖೆಯ ಅನುಷ್ಠಾನದ ವತಿಯಿಂದ ಸುಮಾರು 28.40 ಲಕ್ಷ ರೂ. ವೆಚ್ಚದಲ್ಲಿ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಮರಾಠಿ ಶಾಲೆಗೆ ಎರಡು ಹೆಚ್ಚವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಲಾಯಿತು.

ಗ್ರಾಮೀಣ ಕ್ಷೇತ್ರವು ದಿನದಿಂದ ದಿನಕ್ಕೆ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಇದು ನಿರಂತರವಾಗಿ ಮುಂದುವರಿಯಲಿದೆ. ಕ್ಷೇತ್ರದ ಸರ್ವಾಂಗೀಣ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಜನರ ಸಹಕಾರವಿದ್ದರೆ ಹಿಂದುಳಿದಿದ್ದ ಈ ಕ್ಷೇತ್ರ ಅತೀ ಶೀಘ್ರದಲ್ಲಿ ಮಾದರಿಯಾಗಲಿದೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ