ನಾಳೆ ಕುಮಾರಸ್ವಾಮಿ ಬಡಾವಣೆಯಲ್ಲಿ ಪ್ಲಾಸ್ಟಿಕ್ ಮುಕ್ತ ಬೆಳಗಾವಿಗೆ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-
ಬೆಳಗಾವಿಯ ಹುಕ್ಕೇರಿ ಹಿರೇಮಠದ ಸಂಕಲ್ಪ ಪಾಸ್ಟಿಕ್ ಮುಕ್ತ ಅಭಿಯಾನವನ್ನು ಕಳೆದ 2018 ನವೆಂಬರ್ 17ರಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆರಂಭಿಸಿದರು.
ಕರ್ನಾಟಕ, ಮಹಾರಾಷ್ಟ್ರ, ಗೋವಾ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ 1.80ಲಕ್ಷ ಬಟ್ಟೆ ಚೀಲಗಳನ್ನು ವಿತರಿಸುವ ಮೂಲಕ ಭಾರತ ಪ್ಲಾಸ್ಟಿಕ್ ಮುಕ್ತವಾಗಬೇಕೆಂಬ ಸಂಕಲ್ಪ ಸಾರಿ ಎಲ್ಲರಿಗೂ ತಿಳುವಳಿಕೆ ನೀಡಿದರು. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಆ.15 ರಂದು ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಅಧಿಕೃತವಾಗಿ ಘೋಷಣೆ ಮಾಡಿದರು.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ, ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ, ಗೋವಾ ಸಿಎಂ ಸೇರಿದಂತೆ ಕೇಂದ್ರ ಸಚಿವರು ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸುವುದರ ಮೂಲಕ ಶ್ರೀಗಳ ಕಾರ್ಯವನ್ನು ಪ್ರಶಂಸಿಸಿದ್ದಾರೆ.
ನಾಳೆ ಸೆ.8 ಭಾನುವಾರ ಬೆಳಗಾವಿ ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಂಜೆ 6ಕ್ಕೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ಆರಂಭಿಸುತ್ತಿದೆ.
ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಆಗಮಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ