
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಕುಮಾರಸ್ವಾಮಿ ಲೇಔಟ್ ಪ್ರದೇಶದಲ್ಲಿರುವ ಶಿವಾಲಯ ಮಂದಿರದ ನೂತನ ಸಮುದಾಯ ಭವನ ಕಟ್ಟಡದ ಕಾಮಗಾರಿಗೆ ಶಾಸಕರ ಅನುದಾನದಲ್ಲಿ 5 ಲಕ್ಷ ರೂ, ನೀಡಲಾಗುತ್ತಿದ್ದು, ಈ ಪೈಕಿ ಮೊದಲ ಕಂತಿನಲ್ಲಿ 2.70 ಲಕ್ಷ ರೂ,ಗಳ ಚೆಕ್ ನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಸಂಜೆ ದೇವಸ್ಥಾನದ ಕಮೀಟಿಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ, ಕುಮಾರಸ್ವಾಮಿ ಲೇ ಔಟ್ ನ ಅಧ್ಯಕ್ಷ, ಉಪಾಧ್ಯಕ್ಷರು, ದೇವಸ್ಥಾನ ಕಮೀಟಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ