Kannada NewsKarnataka News

ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಗೆ ಗೃಹ ಸಚಿವರ ಅರಗ ಜ್ಞಾನೇಂದ್ರ ಅವರಿಂದ ಬುಧವಾರ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳೆಯರಿಗೆ ಸ್ವಯಂ ರಕ್ಷಣೆ ನೀಡುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ ಕೆ.ಎಸ್.ಆರ್.ಪಿಯ ಸ್ವಯಂ ರಕ್ಷಣ ತರಬೇತಿ ನೀಡುತ್ತಿದೆ ಈ ತರಬೇತಿ ಶಿಬಿರವನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಸೆಪ್ಟೆಂಬರ್ ೮ ರಂದು ಉದ್ಘಾಟನೆ ಮಾಡಲಿದ್ದಾರೆ.

ವಿದ್ಯಾರ್ಥಿನಿಯರಿಗೆ ಸುರಕ್ಷತೆ ಎಂಬುದು ಇತ್ತೀಚಿಗೆ ಸವಾಲಿನ ಕಾರ್ಯವಾಗಿದೆ. ಅವರಲ್ಲಿ ಸ್ವಯಂ ರಕ್ಷಣಾ ಕೌಶಲ್ಯಗಳನ್ನು ಬೆಳೆಸುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಒಂದು ದಿಟ್ಟ ಹೆಜ್ಜೆಯನ್ನಿಟ್ಟಿದೆ. ಮಾರ್ಚ್ ೮ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಂದಿನ ಗೃಹ ಸಚಿವರಾಗಿದ್ದ ಹಾಗೂ ಹಾಲಿ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಹಿಳಾ ಸಬಲೀಕರಣ ಮತ್ತು ಸುರಕ್ಷತೆಯ ಹೊಸ ಅಧ್ಯಾಯಕ್ಕೆ ಚಾಲನೆ ನೀಡಿದರು.

ಕರ್ನಾಟಕ ರಾಜ್ಯ ಮೀಸಲು ಪಡೆಯ ಮಹಿಳಾ ಸಿಬ್ಬಂದಿಗಳು ೧೩ ರಿಂದ ೨೫ ವರ್ಷದೊಳಗಿನ ಮಹಿಳೆಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡುವ ಕಾರ್ಯವನ್ನು ಮಾನ್ಯ ಕೆ.ಎಸ್.ಆರ್.ಪಿ ಯ ಎ.ಡಿ.ಜಿ.ಪಿ ಅಲೋಕ್ ಕುಮಾರ್ ಅವರ ನೇತೃತ್ವದ ಹಾಗೂ ಮಾರ್ಗದರ್ಶನದಲ್ಲಿ ಕೆ.ಎಸ್.ಆರ್.ಪಿ ಎರಡನೇ ಪಡೆಯ ಸಿ.ಆರ್ ಹಾಗೂ ಡಿ.ಆರ್ ವಿಭಾಗ ಬೆಳಗಾವಿಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದ್ದು ಕಾಲೇಜು ವಿದ್ಯಾರ್ಥಿನಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ .

ಪೊಲೀಸ್ ಇಲಾಖೆ ಯುವ ಮಹಿಳಾ ಸಿಬ್ಬಂದಿಗಳಿಗೆ ನುರಿತ ಕರಾಟೆ ಮತ್ತು ಜೋಡು ತರಬೇತುದಾರರಿಂದ ತರಬೇತಿ ಒದಗಿಸಿ ಅವರಿಂದ ಬೆಳಗಾವಿ ನಗರದ ವಿವಿಧ ೧೦ ಪ್ರೌಢಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ ಇದುವರೆಗೂ ಒಟ್ಟು ೫೦೦ ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ತರಬೇತಿಯನ್ನು ಆರಂಭಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಸಂದಿಗ್ಧ ಸಂದರ್ಭ ಎದುರಾದ ಸಂದರ್ಭದಲ್ಲಿ ಅದರಿಂದ ಪಾರಾಗುವ ಆತ್ಮವಿಶ್ವಾಸ ಧೈರ್ಯವನ್ನು ಹೆಣ್ಣು ಮಕ್ಕಳಲ್ಲಿ ಮೂಡಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ ಹಾಗೂ ಕಾಲೇಜಿನ ಹೆಣ್ಣುಮಕ್ಕಳಿಗೆ ಸ್ವಯಂರಕ್ಷಣೆ ಅತ್ಯಂತ ಅವಶ್ಯಕವಾಗಿದೆ ಪ್ರಾರಂಭಿಕವಾಗಿ ಪೊಲೀಸ್ ಸಿಬ್ಬಂದಿ ಕುಟುಂಬದ ಹೆಣ್ಣು ಮಕ್ಕಳಿಗೆ ತರಬೇತಿ ಪ್ರಾರಂಭಿಸಿ ಹಂತಹಂತವಾಗಿ ಎಲ್ಲರಿಗೂ ವಿಸ್ತರಿಸಲಾಗಿದೆ.

ಇದು ಸ್ವಯಂ ರಕ್ಷಣಾ ತರಬೇತಿ ಎಲ್ಲರಿಗೂ ಅಗತ್ಯವಾಗಿದ್ದು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದುಷ್ಕೃತ್ಯ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೂ ಅವಕಾಶ ನೀಡಿ ತರಬೇತಿ ನೀಡಲು ಚಿಂತಿಸಲಾಗಿದೆ. ಅದಕ್ಕಾಗಿ ೨ನೇ ಪಡೆಯ ಕಮಾಂಡೆಂಟ್ ಹಂಜಾ ಹುಸೇನ್ ಹಾಗೂ ಪಡೆಯ ಎಲ್ಲಾ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡು ಅವಶ್ಯಕ ನುರಿತ ತರಬೇತುದಾರರಾದ ಬೆಳಗಾವಿ ಜಿಲ್ಲಾ ಕರಾಟೆ ಅಸೋಸಿಯೇಷನ್ ರವರ ಸಹಯೋಗದಲ್ಲಿ ಹೆಚ್ಚಿನ ತರಬೇತಿ ಮೂಲಕ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿ ಹಾಗೂ ನೋಂದಣ ಗಾಗಿ ದೂ. ೯೪೮೦೮೦೫೮೯೫, ೯೪೮೦೮೦೮೯೪ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ

ಸ್ವಯಂ ರಕ್ಷಣಾ ತರಬೇತಿಗೆ ಚಾಲನೆ:
ಸಪ್ಟೆಂಬರ್ ೮ ರಂದು ಮುಂಜಾನೆ ೮.೩೦ ಕೆ.ಎಸ್.ಆರ್.ಪಿ ತರಬೇತಿ ಶಾಲೆಯಲ್ಲಿ ನಡೆಯುವ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಮುಖ್ಯ ಅಥಿತಿಗಳಾಗಿ ಗೃಹ ಸಚಿವರಾದ ಅರಗ್ ಜ್ಞಾನೇಂದ್ರ ಮುಖ್ಯ ಅಥಿತಿಗಳಾಗಿ ಆಗಮಿಸಲಿದ್ದು, ಕೆ.ಎಸ್.ಆರ್.ಪಿ ತರಬೇತಿ ಶಾಲೆಯಲ್ಲಿ ಮೊದಲನೇ ತಂಡದ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಭಾಗವಹಿಸಿ ನಂತರ ಸ್ವಯಂ ರಕ್ಷಣಾ ತರಬೇತಿಯನ್ನು ಬೆಳಿಗ್ಗೆ ೯ ಗಂಟೆಗೆ ಉದ್ಘಾಟಿಸಲಿದ್ದಾರೆ.

ತರಬೇತಿ ಪಡೆಯುತ್ತಿರುವ ಕೆ.ಎಸ್.ಆರ್.ಪಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿ ಮಕ್ಕಳಿಂದ ಆಕರ್ಷಕ ಅಣುಕು ಪ್ರದರ್ಶನ ಏರ್ಪಡಿಸಲಾಗಿದ್ದು ಬೆಳಗಾವಿಯ ಎಲ್ಲ ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕಮಾಂಡೆಂಟ್ ಹಂಜಾ ಹುಸೇನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿಗೆ ನಾಳೆ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಳಗಾವಿಯಲ್ಲಿ ಬಿಜೆಪಿಗೆ ಕಡಿಮೆ ಸೀಟ್ ಬಂದಿದ್ದೇಕೆ?

ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ

ಎಸಿಬಿ ಬಲೆಗೆ ಬಿದ್ದ ಸರ್ವೇಯರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button