Belagavi NewsBelgaum NewsKannada NewsKarnataka News
*ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಯುವಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಇಂದು ಸಂಜೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯಲ್ಲಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ ಬೈಲಹೊಂಗಲದ ನಾಲ್ವರು ಪ್ರಯಾಣ ಮಾಡುತ್ತಿದ್ದು, ಬೆಳಗಾವಿಯಿಂದ ಬೈಲಹೊಂಗಲ ಕಡೆ ಹೋಗುತ್ತಿದ್ದ ವೇಳೆ ನಡೆದ ಅಫಘಾತ ಸಂಭವಿಸಿದೆ ಎನ್ನಲಾಗಿದೆ.
ಈ ದುರ್ಘಟನೆಯಲ್ಲಿ ಅಥಿಕ (24) ವರ್ಷದ ಯುವಕ ಮೃತಪಟ್ಟಿದ್ದಾನೆ ಕಾರಿನಲ್ಲಿದ್ದ ಇಬ್ಬರು ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


