Belagavi NewsBelgaum NewsKannada NewsKarnataka News

*ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಯುವಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾರು ಚಾಲಕನ‌‌ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. 

ಇಂದು ಸಂಜೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯಲ್ಲಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ ಬೈಲಹೊಂಗಲದ ನಾಲ್ವರು ಪ್ರಯಾಣ ಮಾಡುತ್ತಿದ್ದು, ಬೆಳಗಾವಿಯಿಂದ ಬೈಲಹೊಂಗಲ ಕಡೆ ಹೋಗುತ್ತಿದ್ದ ವೇಳೆ ನಡೆದ ಅಫಘಾತ ಸಂಭವಿಸಿದೆ ಎನ್ನಲಾಗಿದೆ.

ಈ ದುರ್ಘಟನೆಯಲ್ಲಿ ಅಥಿಕ (24) ವರ್ಷದ ಯುವಕ ಮೃತಪಟ್ಟಿದ್ದಾನೆ‌ ಕಾರಿನಲ್ಲಿದ್ದ ಇಬ್ಬರು ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಮತ್ತೋರ್ವನ‌ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಬೈಲಹೊಂಗಲ ‌ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button