
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದು, ಮೂರು ಮಂದಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲೂರು ತಾಲ್ಲೂಕು ಬೊಮ್ಮಕ್ಕನಹಳ್ಳಿ ಬಳಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ.
ಯಾದಗಿರಿ ಮೂಲದ ಮೌಲಾ(35), ರೆಹಮಾನ್(15) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು. ಫಾತಿಮಾ ಬೇಗಂ, ಸಲೀಮಾ ಬೇಗಂ ಹಾಗೂ ಸಮೀರ್ ಎಂಬುವರಿಗೆ ಗಾಯಗೊಂಡಿದ್ದು, ಅವರನ್ನು ಬಳ್ಳಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರಿಂದ ಯಾದಗಿರಿಗೆ ತೆರಳುವಾಗ ಚಾಲಕನ ನಿಯಂತ್ರಣದ ಕಾರು ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಪಿಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.