
ಪ್ರಗತಿವಾಹಿನಿ ಸುದ್ದಿ: ಕಾರು ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ, ನಿಯಂತ್ರಣ ತಪ್ಪಿದ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರಿನ ಚಾಲಕನಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕಾರು ನಿಯಂತ್ರಣ ತಪ್ಪಿ ಬೈಕ್, ಆಟೋ, ಕಾರು ಸೇರಿದಂತೆ ವಿವಿಧ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಆಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



