
ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತರಾಗಿರುವ ಡ್ರೋನ್ ಪ್ರತಾಪ್ ಅವರಿಗೆ ಮಧುಗಿರಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಡ್ರೋನ್ ಪ್ರತಾಪ್ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಠಾಣೆ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಜೆ ಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಡ್ರೋನ್ ಪ್ರತಾಪ್ ಗೆ 10 ದಿನಗಳ ಕಾಲ ಅಂದರೆ ಡಿ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಹಾಗೂ ಅವರ ಇಬ್ಬರು ಸ್ನೇಹಿಅರನ್ನು ಪೊಲೀಸರು ಬಂಧಿಸಿದ್ದರು. ಫಾರ್ಮ್ ಹೌಸ್ ಮಾಲೀಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ