ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣದಲ್ಲಿ ಜೈಲು ಸೇರಿದ್ದ ಡ್ರೋನ್ ಪ್ರತಾಪ್, ಇಂದು ಮಧುಗಿರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟಿಸಿ ಪ್ರಯೋಗಿಸಿದ್ದ ವಿಡಿಯೋವನ್ನು ಡ್ರೋನ್ ಪ್ರತಾಪ್ ತಮ್ಮದೇ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಿದ್ದರು. ಈ ಘಾನೆ ಬೆನ್ನಲ್ಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ತುಮಕೂರು ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಬಂಧಿಸಿದ್ದರು.
ಡ್ರೋನ್ ಪ್ರತಾಪ್ ಅವರಿಗೆ ನಿನ್ನೆ ತುಮಕೂರಿನ ಮಧುಗಿರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡ್ರೋನ್ ಪ್ರತಾಪ್, ಪೊಲೀಸರು ನನ್ನನ್ನು ಬಂಧಿಸಿದ್ದು ಯಾಕೆ? ದೇಶದಲ್ಲಿ ಹಲವರು ಕೆಜಿ ಗಟ್ಟಲೇ ಸೋಡಿಯಂ ಸ್ಫೋಟ ಮಾಡಿ ಪ್ರಯೋಗದ ವಿಡಿಯೋ ಮಾಡಿದ್ದಾರೆ. ಆದಾಗ್ಯೂ ಅವರನ್ನು ಬಂಧಿಸಿಲ್ಲ. ನಾನು ಶೈಕ್ಷಣಿಕ ಕಲಿಕೆ ನಿಟ್ಟಿನಲ್ಲಿ ಪ್ರಯೋಗದ ವಿಡಿಯೋ ಮಾಡಿದರೂ ಈ ಬಗ್ಗೆ ಹೇಳಿಕೆ ನೀಡಿದ್ದರೂ ನನ್ನನ್ನು ಬಂಧಿಸಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ