ಪ್ರಗತಿವಾಹಿನಿ ಸುದ್ದಿ: ನವಜಾತ ಶಿಶುವನ್ನು ಮನೆಯ ಹೊಸ್ತಿಲು ಬಳಿ ಎಸೆದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಚಾಲುಕ್ಯ ನಗರದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ನಡೆದಿದೆ.
ನಗರದ ಖಾಸಗಿ ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ. ಪೊಲೀಸ್ ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ನಸುಕಿನ ಜಾವ ನವಜಾತ ಗಂಡು ಶಿಶುವನ್ನು ಇಟ್ಟಿದ್ದಾರೆ. ಮಗು ಮೃತಪಟ್ಟಿದೆ.
ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಕ್ಲಿಪ್ ಜೊತೆಯಲ್ಲಿ ಮಗುವನ್ನು ಇಟ್ಟಿದ್ದಾರೆ. ನವಜಾತ ಮಗುವಿನ ದೇಹದ ಮೇಲೆ ಕಪ್ಪು ಕಪ್ಪು ಕಲೆಗಳು ಇದ್ದು ಅನಾರೋಗ್ಯ ಕಾರಣದಿಂದಾಗಿ ಮೃತಪಟ್ಟಿದ್ದು ಆ ಕಾರಣಕ್ಕೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಬಾಡಿಗೆ ಇರುವ ವಿದ್ಯಾರ್ಥಿನಿಯರು ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.
ಮೃತ ಮಗುವನ್ನು ಕಂಡು ವಿದ್ಯಾರ್ಥಿನಿಯರು ಗಾಬರಿಯಾಗಿದ್ದು, ಅವರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಆದರ್ಶ ನಗರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಯ ಸುತ್ತಮುತ್ತಲಿನ ಸಿಸಿ ಟಿವಿ ಪರಿಶೀಲನೆ. ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ