Kannada NewsKarnataka NewsLatest

*ಅಪ್ರಾಪ್ತ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ… ಸಾಮಾಜಿಕ ಹೋರಾಟಗಾರನಿಂದಲೇ ಕೃತ್ಯ…!*

ಪ್ರಗತಿವಾಹಿನಿ ಸುದ್ದಿ; ಹಾಸನ: ಸಾಮಾಜಿಕ ಹೋರಾಟಗಾರ ಎಂದು ಕರೆಸಿಕೊಂಡ ವೃದ್ಧನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬಾಲಕಿ 2 ತಿಂಗಳ ಗರ್ಭಿಣಿಯಾಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಮೀಸೆ ಮಂಜಯ್ಯ (73) ಎಂಬ ವೃದ್ಧನನ್ನು ಪೊಲೀಸರು ವಶಕ್ಕೆ ಪಡೆದು ವಿಚರಣೆ ನಡೆಸಿದ್ದಾರೆ.

Home add -Advt

ಆರೋಪಿ ವಿಧವಾ ವೇತನ, ಪಿಂಚಣಿ ಹಣ ಕೊಡಿಸುವುದಾಗಿ ಹೇಳಿ ಹಲವು ಮಹಿಳೆಯರಿಗೆ ಮೋಸ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದೇ ವೇಳೆ ಮಗಳು ಗರ್ಭಿಣಿ ಎಂಬ ವಿಷಯ ತಿಳಿಯುತ್ತಿದ್ದಂತೆ ಬಾಲಕಿ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

Related Articles

Back to top button