Politics

*ಗೋ ಬ್ಯಾಕ್ ಮೋದಿ ಎಂದು ಕೈಯಲ್ಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಕಡಿಮೆ ಪ್ರಮಾಣದಲ್ಲಿ ಬರ ಪರಿಹಾರ ಘೋಷಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ ತೀವ್ರಗೊಂಡಿದೆ.

ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಗೃಹ ಸಚಿವ ಡಾ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಕೈಯಲ್ಲಿ ಚೊಂಬು ಹಿಡಿದು ಪ್ರತಿಭನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಸಚಿವರು, ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಗಿರುವ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button