Kannada NewsKarnataka NewsLatest

*BREAKING: ಡ್ರಗ್ಸ್ ಪ್ರಕರಣ: ಸಚಿವ ಜಮೀರ್ ಅಹ್ಮದ್ ಪರಮಾಪ್ತ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪರಮಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದಿದ್ದ ಡ್ರಗ್ಸ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ಅನ್ವರ್ ಬಾಷಾ ಎಂಬಾತನನ್ನು ಬಂಧಿಸಲಾಗಿದೆ. ಇದೇ ವೇಳೆ ಪಾರಸ್, ಕೃಷ್ಣಮೂರ್ತಿ, ಧೋನಿ ಅಲಿಯಾಸ್ ಮಂಜುನಾಥ್ ಎಂಬುವವರನ್ನೂ ಅರೆಸ್ಟ್ ಮಾಡಲಾಗಿದೆ.

ದಾವಣಗೆರೆಯಲ್ಲಿ ಡಿಸೆಂಬರ್ 23ರಂದು ಡ್ರಗ್ಸ್ ದಂಧೆ ನಡೆಸುತ್ತಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡ ವೇದಮೂರ್ತಿ ಸೇರಿ ನಾಲ್ವರನ್ನು ಬಂಧಿಸಿದ್ದರು. ವೇದಮೂರ್ತಿ ದಾವಣಗೆರೆ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತ ಎಂದು ತಿಳಿದುಬಂದಿದೆ. ಬಂಧಿತರಿಂದ 90 ಗ್ರಾಂ ಎಂಡಿಎಂ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ಅನ್ವರ್ ಬಾಷಾ ಸೇರಿ ಹಲವರನ್ನು ಬಂಧಿಸಲಾಗಿದೆ. ದಾವಣಗೆರೆ ಡ್ರಗ್ಸ್ ಪ್ರಕರಣದಲ್ಲಿ ಸಚಿವರುಗಳ ಆಪ್ತರೇ ಭಾಗಿಯಾಗಿರುವುದು ಆಘಾತಕಾರಿ ಸಂಗತಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button