
ಪ್ರಗತಿವಾಹಿನಿ ಸುದ್ದಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ವೈದ್ಯನನ್ನು ಮಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ನಿವಾಸಿ ಬೀದರ್ ಮೂಲದ ವೈದ್ಯ ಪ್ರಜ್ವಲ್ ಪಿಣ್ಯಾಸ್ ಬಂಧಿತ ಆರೋಪಿ. ಮಂಗಳೂರಿನ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣ ಆರೋಪಿಗಳ ಮೂಲ ತನಿಖೆ ನಡೆಸಿದಾಗ ಕಿಂಗ್ ಪಿನ್ ವೈದ್ಯ ಡಾ.ಪ್ರಜ್ವಲ್ ಪೀಣ್ಯಾಸ್ ಎಂಬುದು ಗೊತ್ತಾಗಿದೆ. ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಪೆಡ್ಲಿಂಗ್ ಮಾಡುತ್ತಿದ್ದ.
ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿ ಡಾ.ಪ್ರಜ್ವಲ್ ಹಾಗೂ ಇತರ ಪೆಡ್ಲರ್ ಗಳು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಪೂರೈಸುತ್ತಿದ್ದರು. ಕೆಲ ದಿನಗಳ ಹಿಂದೆ ಡ್ರಗ್ಸ್ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆ ನಡೆಸಿದಾಗ ವೈದ್ಯ ಪ್ರಜ್ವಲ್ ಪಿಣ್ಯಾಸ್ ಹೆಸರು ಬಾಯ್ಬಿಟ್ಟಿದ್ದಾರೆ. ದ್ರಗ್ಸ್ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಒಟ್ಟು 9 ಆರೋಪಿಗಳನ್ನು ಬಂಧಿಸಿದ್ದಾರೆ.