Kannada NewsKarnataka NewsLatest

*ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ವಿಶೇಷ ಕಾರ್ಯಪಡೆ ರಚಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಾದಕ ವಸ್ತುಗಳು, ಡ್ರಗ್ಸ್ ದಂಧೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹೊಸ ವ್ಯವಸ್ಥೆ ಜಾರಿಗೆ ತಂದಿದೆ. ವಿಶೇಷ ಕಾರ್ಯಪಡೆ ರಚಿಸಿದೆ.

ಮಾದಕ ವಸ್ತುಗಳ ಬಳಕೆ, ಮಾರಾಟ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಾದಕ ವಸ್ತಿಗಳ ಕುರಿತ ಕೇಸ್ ಗಳ ಮೇಲ್ವಿಚಾರಣೆಗಾಗಿ ಕಾರ್ಯಪಡೆ ರಚಿಸಲಾಗಿದೆ. 56 ಅಧಿಕಾರಿಗಳು, ಹಾಗೂ ಸಿಬ್ಬಂದಿಗಳನ್ನು ಕಾರ್ಯಪಡೆ ಒಳಗೊಂಡಿದೆ. ಡಿಜಿ & ಐಜಿಪಿ ನಿಗಾದಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ.

ಕಾರ್ಯಪಡೆಗಾಗಿ 10 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದ್ದು, ಉಳಿದ 56 ಹುದ್ದೆಗಳು ನಕ್ಸಲ್ ನಿಗ್ರಹ ಪಡೆಯಿಂದ ವರ್ಗಾವಣೆಯಾಗಲಿವೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button