ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆಫ್ರಿಕನ್ ಪ್ರಜೆಗಳು ಬೆಂಗಳೂರಿನ ಜೆ.ಸಿ.ನಗರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಅನಾರೋಗ್ಯದಿಂದ ಮೃತಪಟ್ಟಿದ್ದ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ. 5 ಗ್ರಾಂ ಎಂಡಿಎಂ ಡ್ರಗ್ಸ್ ಜೊತೆಗೆ ಆಫ್ರಿಕನ್ ಪ್ರಜೆಯನ್ನು ಜೆ.ಸಿ.ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್ ವಶದಲ್ಲಿದ್ದ ಆತನಿಗೆ ಎದೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದ.
ಇದೀಗ ಮೃತ ಆಫ್ರಿಕನ್ ಪ್ರಜೆಯ ಸಂಬಂಧಿಕರು, ಸ್ನೇಹಿತರು ಹಾಗೂ ಇತರೆ ಆಫ್ರಿಕನ್ ಪ್ರಜೆಗಳು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಪೊಲೀಸರೇ ಆತನನ್ನು ಹೊಡೆದು ಸಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಆಫ್ರಿಕನ್ ಪ್ರಜೆಯೋರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿರುವ ಘಟನೆ ನಡೆದಿದೆ.
ಪೊಲೀಸ್ ಠಾಣೆ ಎದುರು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ.
ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ