ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಸಿಸಿಬಿ ನೋಟೀಸ್ ನೀಡಿರುವ ಹಿನ್ನಲೆಯಲ್ಲಿ ಇಂದು ಅನುಶ್ರೀ ಸಿಸಿಬಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಬಂಧಿತ ಕಿಶೋರ್ ಶೆಟ್ಟಿ ಹಾಗೂ ತರುಣ್ ನೀಡಿದ್ದ ಮಾಹಿತಿ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ನಿನ್ನೆ ಅನುಶ್ರೀಗೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅನುಶ್ರೀ ಇಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಸಿಸಿಬಿ ಮುಂದೆ ಹಾಜರಾಗಲಿದ್ದಾರೆ. ಈ ವೇಳೆ ಅನುಶ್ರೀಯನ್ನು ಸಿಸಿಬಿ ಮಾತ್ರವಲ್ಲ ಎನ್ ಸಿಬಿ ಕೂಡ ಹಲವು ಮಾಹಿತಿಗಳನ್ನು ಕಲೆ ಹಾಕಲಿದೆ.
ಬಂಧಿತ ತರುಣ್ ನಿರೂಪಕಿ ಅನುಶ್ರೀ ಜೊತೆ ನಂಟು ಹೊಂದಿದ್ದು, ಲಾಕ್ ಡೌನ್ ವೇಳೆ ನಡೆದಿದ್ದ ಡ್ರಗ್ಸ್ ಪಾರ್ಟಿಗಳಲ್ಲಿ ಅನುಶ್ರೀ ಭಾಗಿಯಾಗಿದ್ದಳು ಎಂದು ವಿಚಾರಣೆಯಲ್ಲಿ ತಿಳಿಸಿದ್ದಾನೆ ಎನ್ನಲಾಗಿದೆ. ಒಟ್ಟಾರೆ ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಇದೀಗ ಕಿರುತೆರೆಗೂ ವ್ಯಾಪಿಸಿದ್ದು, ನಿರೂಪಕಿ ಅನುಶ್ರೀ ಡ್ರಗ್ಸ್ ಬಗ್ಗೆ ಬಾಯ್ಬಿಡ್ತಾರಾ ಕಾದುನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ