ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ನಿರ್ಮಾಪಕ ಕೆ.ಮಂಜು ಇಂದು ಅನುಶ್ರೀ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಅನುಶ್ರೀ ಅವರ ಬೆಂಗಳೂರಿನ ನಿವಾಸಕ್ಕೆ ತೆರಳಿ ಅನುಶ್ರೀ ಹಾಗೂ ಅವರ ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ. ಅನುಶ್ರೀ ಭೇಟಿ ಬಳಿಕ ಮಾತನಾಡಿರುವ ಕೆ.ಮಂಜು, ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿ ಬಂದಿದ್ದಾರೆ. ಬಂಧಿತ ಆರೋಪಿಗಳಾದ ಕಿಶೋರ್ ಶೆಟ್ಟಿ ಹಾಗೂ ತರುಣ್ ಪರಿಚಯವಿದೆಯೇ ಎಂದು ಅಧಿಕಾರಿಗಳು ಪ್ರಶ್ನಿಸಿದ್ದಾರಂತೆ. ಅದಕ್ಕೆ ಅನುಶ್ರೀ ಇಬ್ಬರ ಪರಿಚಯವಿದೆ. ಆದರೆ ಅವರ ವ್ಯವಹಾರಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ ಎಂದರು.
ಇನ್ನು ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿರುವ ವಿಚಾರವಾಗಿ, ಈ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. ತಾನು ಯಾರಿಗೂ ಕಾಲ್ ಕೂಡ ಮಾಡಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ