Latest

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಬಿಗ್ ರಿಲೀಫ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ರಕರಣದಿಂದ ಎನ್ ಸಿಬಿ ಕ್ಲಿನ್ ಚಿಟ್ ನೀಡಿದೆ.

ಕಳೆದ ವರ್ಷ ಅಕ್ಟೋಬರ್ 2ರಂದು ಮುಂಬೈನ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಎನ್ ಸಿಬಿ ಅಧಿಕಾರಿಗಳು ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿದಂತೆ 19 ಜನರನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಜೈಲು ಸೇರಿದ್ದ ಆರ್ಯನ್ ಖಾನ್ ಅಕ್ಟೋಬರ್ 30ರಂದು ಜಾಮೀನಿನ ಮೇಲೆ ಹೊರಬಂದಿದ್ದರು.

ಇದೀಗ ಈ ಪ್ರಕರಣ ಸಂಬಂಧ ಎನ್ ಸಿಬಿ ಅಧಿಕಾರಿಗಳು ಚಾರ್ಜ್ ಶೀಟ್ ಫೈಲ್ ಮಾಡಿದ್ದು, ಆರ್ಯನ್ ಖಾನ್ ಸೇರಿದಂತೆ ಒಟ್ಟು 6 ಜನರ ಹೆಸರನ್ನು ಪ್ರಕರಣದಿಂದ ಕೈಬಿಟ್ಟಿದ್ದಾರೆ. ಆರ್ಯನ್ ಖಾನ್ ವಿರುದ್ಧ ಸೂಕ್ತ ಸಾಕ್ಷಾಧಾರಗಳಿಲ್ಲದ ಕಾರಣ ಚಾರ್ಜ್ ಶೀಟ್ ನಿಂದ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಒಟ್ಟು 52 ಸಾವಿರ ಕೋಟಿ ಬಂಡವಾಳ ಹೂಡಿಕೆ ಒಪ್ಪಂದಕ್ಕೆ ಸಹಿ; 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

Related Articles

Back to top button