
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ದಿನೇ ದಿನೇ ಹೊಸ ತಿರುಗಳನ್ನು ಪಡೆದುಕೊಳ್ಳುತ್ತಿದ್ದು, ಚಿತ್ರರಂಗದಿಂದ ಇದೀಗ ಕಿರುತೆರೆಗೆ ಬಂದು ನಿಂತಿದೆ. ಬ್ರಹ್ಮಗಂಟು ಧಾರಾವಾಹಿಯ ನಟಿ ಗೀತಾಭಾರತಿ ಭಟ್ ಹಾಗೂ ಗಟ್ಟಿಮೇಳ ಖ್ಯಾತಿಯ ಅಭಿಷೇಕ್ ದಾಸ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಐಎಸ್ ಡಿ(ಆಂತರಿಕ ಭದ್ರತಾ ದಳ) ನೋಟೀಸ್ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಗೀತಾಭಾರತಿ, ಡ್ರಗ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಬಂದಿರುವುದು ನಿಜ. ವಿಚಾರಣೆಗೆ ಕರೆದಿದ್ದಾರೆ ಎಂದರೆ ನಾವು ತಪ್ಪು ಮಾಡಿದ್ದೇವೆ ಎಂದಲ್ಲ. ನಮಗೆ ಆಗದವರು ನನ್ನ ಹೆಸರು ಹೇಳಿರಬಹುದು. ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಅಭಿಷೇಕ್ ದಾಸ್ ಮತ್ತು ಗೀತಾಭಾರತಿ ಭಟ್ ಇಂದು ಆಂತರಿಕ ಭದ್ರತಾ ದಳದ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.