ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಖ್ಯಾತ ಡಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿ ಸ್ನೇಹಿತೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ಪೆಡ್ಲರ್ ಕಿಶೋರ್ ಶೆಟ್ಟಿ ಸಿಸಿಬಿ ವಿಚಾರಣೆ ವೇಳೆ ನೀಡಿದ್ದ ಮಾಹಿತಿ ಹಿನ್ನೆಲೆಯಲ್ಲಿ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಬಂಧಿಸಲಾಗಿದೆ. ಬಂಧಿತ ಯುವತಿ ಮಣಿಪುರ ಮೂಲದ ಆಸ್ಕಾ ಎಂದು ಗುರುತಿಸಲಾಗಿದೆ.
ಕಿಶೋರ್ ಶೆಟ್ಟಿ ಜೊತೆ ಆಸ್ಕಾ ಡ್ರಗ್ಸ್ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಳು. ಅಲ್ಲದೇ ಲಾಕ್ ಡೌನ್ ಸಂದರ್ಭಗಳಲ್ಲಿ ಕಿಶೋರ್ ನಡೆಸಿದ್ದ ಭರ್ಜರಿ ಪಾರ್ಟಿಗಳಲ್ಲೂ ಆಸ್ಕಾ ತನ್ನ ಕೆಲ ಸ್ನೇಹಿತೆಯರ ಜೊತೆ ಭಾಗಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಸ್ಕಾ ಸ್ನೇಹಿತೆಯರಿಗೂ ಸಿಸಿಬಿ ನೋಟೀಸ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ