Latest

ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಮಾರಾಟ; ಪ್ರೇಮಿಗಳ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡುತ್ತಿದ್ದ ಪ್ರೇಮಿಗಳಿಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸಿಗಿಲ್ ವರ್ಗಿಸ್ ಹಾಗೂ ವಿಷ್ಣುಪ್ರಿಯ ಬಂಧಿತ ಆರೋಪಿಗಳು. ಇವರಿಬ್ಬರೂ ವಿದ್ಯಾಭ್ಯಾಸಕ್ಕಾಗಿ ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಡ್ರಗ್ಸ್ ದಾಸರಾಗಿದ್ದ ಇಬ್ಬರೂ ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಮಾರಾಟ ಆರಂಭಿಸಿದ್ದರು.

ಕೇರಳ, ತಮಿಳುನಾಡಿನಿಂದ ಡ್ರಗ್ಸ್ ತರಿಸಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಡ್ರಗ್ಸ್ ಪೂರೈಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆದಾಳಿ ನಡೆಸಿದ ಹುಳಿಮಾವು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ವಿವಿಧ ರೀತಿಯ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಉಪಕಾರ ಎಂದಿಗೂ ಮರೆಯಲ್ಲ; ಭಾರತೀಯ ರಾಯಭಾರ ಕಚೇರಿ, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಪಾಕಿಸ್ತಾನ ಯುವತಿ

Home add -Advt

Related Articles

Back to top button