
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿವರೆಗೂ ಮುಂದೂಡಿ ಆದೇಶ ಹೊರಡಿಸಿದೆ.
ಈ ಕುರಿತು ಸಿಸಿಬಿ ಪೊಲೀಸರಿಗೆ ನೋಟೀಸ್ ನೀಡಿರುವ ಸುಪ್ರೀಂ ಕೋರ್ಟ್, ಜನವರಿ ಮೊದಲ ವಾರದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ.