Latest

ಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ದಾಖಲಾದ ನಟಿ ರಾಗಿಣಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಉಸಿರಾಟದ ಸಮಸ್ಯೆ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Home add -Advt

ಡ್ರಗ್ಸ್ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ಕಳೆದ ನಾಲ್ಕು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿದ್ದಾರೆ. ಡ್ರಗ್ಸ್ ಕೇಸ್ ನಲ್ಲಿ ಜೈಲು ಸೇರಿದ್ದ ಇನ್ನೋರ್ವ ನಟಿ ಸಂಜನಾ ಗಲ್ರಾಣಿಗೆ ಇತ್ತೀಚೆಗೆ ಆರೋಗ್ಯ ಸಮಸ್ಯೆ ಕಾರಣದಿಂದಾಗಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

Related Articles

Back to top button