Latest

ಸ್ಯಾಂಡಲ್ ವುಡ್ ನಟಿಯರಿಗೆ ಸಧ್ಯಕ್ಕಿಲ್ಲ ರಿಲೀಫ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರ ಜಾಮೀನು ಅರ್ಜಿಯನ್ನು 33ನೇ ಸೆಷನ್ಸ್ ಕೋರ್ಟ್ ಮುಂದೂಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ, ಸಂಜನಾ, ಶಿವಪ್ರಕಾಶ್ ಸೇರಿದಂತೆ ಐವರ ಜಾಮೀನು ಅರ್ಜಿಯ ವಿಚಾರಣೆ ಇಂದು ನ್ಯಾಯಾಲಯದ ಮುಂದೆ ಬಂದಿತ್ತು. ಈ ವೇಳೆ ಸಿಸಿಬಿ ಪರ ವಕೀಲರು, ಪ್ರಕರಣದ ಕೆಲವರು ಜೈಲು ಮತ್ತು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಎಲ್ಲ ಆರೋಪಿಗಳ ಅರ್ಜಿಯೂ ಒಂದಕ್ಕೊಂದು ಲಿಂಕ್ ಇದೆ. ಒಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಿದರು.

Home add -Advt

ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಸೆ.21ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಹೀಗಾಗಿ ನಟಿ ರಾಗಿಣಿ ಹಾಗೂ ಸಂಜನಾ ಇನ್ನೂ ಎರಡು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾದ ಸ್ಥಿತಿಯಿದೆ.

Related Articles

Back to top button