
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಜಾಲದ ಜೊತೆ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ಸಿಸಿಬಿ ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.
ಬಾಣಸವಾಡಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರವಿಶಂಕರ್ ನನ್ನು ಬಾಡಿವಾರೆಂಟ್ ಪಡೆದು ಸಿಸಿಬಿ ಪೊಲೀಸರು 7 ದಿನಗಳ ಕಾಲ ಮತ್ತೆ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ರವಿಶಂಕರ್ ಈಗಾಗಲೇ ಜೈಲು ಸೇರಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಪರಪ್ಪನ ಅಗ್ರಾಹ ಜೈಲಿನಿಂದಲೇ ಸಿಸಿಬಿ ಮತ್ತೆ ವಶಕ್ಕೆ ಪಡೆದು ವಿಚಾರಣೆ ಮುಂದಾಗಿದೆ ಎನ್ನಲಾಗಿದೆ.