ಪ್ರಗತಿವಾಹಿನಿ ಸುದ್ದಿ; ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿಗೆ ಮುಂಬೈ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆ ಸಹೋದರ ಶೋವಿಕ್ ನನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ನಟಿ ರಿಯಾಗೆ ಕಳೆದ ತಿಂಗಳು ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಶೋವಿಕ್ ಗೆ ಜಾಮೀನು ನಿರಾಕರಿಸಲಾಗಿತ್ತು.
ಇದೀಗ ಶೋವಿಕ್ ಗೆ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಮೂರು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ